✍🌹 *ಮಕ್ಕಳ ದಿನಾಚರಣೆ*
👫👫👫👫👫👫👫👫👫
*"Let us sacrifice our today so that our children can have a better tomorrow." Happy Children's Day!*
*ಮಕ್ಕಳ ದಿನಾಚರಣೆ ಶುಭಾಶಯಗಳು !!*
® *ಜವಹರ್ ಲಾಲ್ ನೆಹರೂ ಅವರಿಗೆ ಮಕ್ಕಳೆಂದರೆ ಬಲು ಇಷ್ಟವಂತೆ. ಮಕ್ಕಳು ಕೊಟ್ಟ ಗುಲಾಬಿಯನ್ನು ತಮ್ಮ ಕೋಟಿನ ಜೇಬಿಗೆ ಸೇರಿಸಿ ಸಂತೋಷಪಡುತ್ತಿದ್ದರಂತೆ. ಮಕ್ಕಳು ಮತ್ತು ಹೂವುಗಳನ್ನು ಹೋಲಿಸುತ್ತಿದ್ದ ನೆಹರು, "ಮಕ್ಕಳೆಂದರೆ ಹೋದೋಟದಲ್ಲಿರುವ ಸುಂದರ ಮೊಗ್ಗುಗಳು" ಎನ್ನುತ್ತಿದ್ದರಂತೆ. ಪುಟ್ಟ ಮಕ್ಕಳ ಕುರಿತು ಕಾಳಜಿ ವಹಿಸಬೇಕು, ಮಕ್ಕಳನ್ನು ಪ್ರೀತಿಯಿಂದ ಪೋಷಿಸಬೇಕು, ಮಕ್ಕಳೇ ದೇಶದ ಭವಿಷ್ಯ ಹಾಗೂ ನಾಳಿನ ನಾಗರಿಕರು ಎಂಬುದು ನೆಹರು ಅಭಿಮತ. ಮಕ್ಕಳ ಮೇಲಿದ್ದ ಇವರ ಅಕ್ಕರೆ, ಪ್ರೀತಿಯ ಸಂಕೇತವಾಗಿ ಅವರ ಜನ್ಮದಿನವನ್ನು ದೇಶದಾದ್ಯಂತ ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.*
🌹✍ *ಮಕ್ಕಳ ದಿನಾಚರಣೆ’ ಹುಟ್ಟಿದ್ದು ಹೀಗೆ...*
☘ *ವಿ.ಎನ್. ಕುಲಕರ್ಣಿ ಎನ್ನುವವರು 1951ರಲ್ಲಿ ವಿಶ್ವಸಂಸ್ಥೆಯ ಒಂದು ಯೋಜನೆಯಡಿಯಲ್ಲಿ ಇಂಗ್ಲೆಂಡ್‌ನ ಮಕ್ಕಳ ಕಲ್ಯಾಣಕ್ಕಾಗಿ ದುಡಿಯುತ್ತಿದ್ದರು. ಆ ದಿನಗಳಲ್ಲಿ ಬಡ ಮಕ್ಕಳ ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕೆ ರಾಣಿ ಎಲಿಜ಼ಬೆತ್-2 ಅವರ ಜನ್ಮದಿನವನ್ನು, ‘ಧ್ವಜ ದಿನಾಚರಣೆ’ಯನ್ನಾಗಿ ಆಚರಿಸುತ್ತಾ ಧನ ಸಂಗ್ರಹಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಕುಲಕರ್ಣಿಯವರ ಮನಸ್ಸು ಸಹಜವಾಗಿಯೇ ಭಾರತೀಯ ಮಕ್ಕಳ ಸ್ಥಿತಿಗತಿಯ ಬಗ್ಗೆ ಮಿಡಿದಿತ್ತು.*
*ಇಂತಹದೊಂದು ಯೋಜನೆ ಭಾರತದಲ್ಲೂ ನಡೆಯಬೇಕು; ಮಕ್ಕಳಿಗಾಗಿ ಧನ ಸಂಗ್ರಹಿಸಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪವಿಟ್ಟರು. ಇದಕ್ಕೆ ಭಾರತದ ಮೊದಲ ಪ್ರಧಾನಮಂತ್ರಿಯಗಿದ್ದ ಚಾಚಾ ನೆಹರೂ ಅವರ ಜನ್ಮದಿನದಷ್ಟು ಪ್ರಶಸ್ತವಾದ ದಿನ ಬೇರೊಂದಿಲ್ಲ ಎನ್ನುವ ಅಭಿಪ್ರಾಯವನ್ನೂ ಮುಂದಿಟ್ಟರು.*
*ಪಂಡಿತ್ ನೆಹರೂ ಇದಕ್ಕೆ ಒಪ್ಪಿಯಾರೇ? ಎನ್ನುವ ಆತಂಕ ಎಲ್ಲರನ್ನೂ ಕಾಡುತ್ತಿತ್ತು. ಆದರೆ ಚಾಚಾ ನೆಹರೂ ಅವರಿಗೆ ಮಕ್ಕಳ ಮೇಲಿನ ಮಮತೆ ಎಷ್ಟಿತ್ತೆಂದರೆ ಅವರು ಮಕ್ಕಳಿಗಾಗಿ ಏನು ಮಾಡಲೂ ಸಿದ್ಧವಿದ್ದರು. ಮುಜುಗರ ಬದಿಗಿಟ್ಟು ಅತ್ಯಂತ ಸಂತೋಷದಿಂದ ತಮ್ಮ ಜನ್ಮದಿನವನ್ನು ‘ಮಕ್ಕಳ ದಿನಾಚರಣೆ’ಯೆಂದು ಆಚರಿಸಲು ಒಪ್ಪಿಕೊಂಡರು.*
*ಈ ರೀತಿ 1951ರಲ್ಲಿ ನವೆಂಬರ್ 14ರಂದು ಭಾರತದಲ್ಲಿ ‘ಮಕ್ಕಳ ದಿನಾಚರಣೆ’ ಆರಂಭವಾಯಿತು. ಮಕ್ಕಳ ಹಕ್ಕು, ಹಿತರಕ್ಷಣೆ ಮತ್ತು ಯೋಗಕ್ಷೇಮದ ಉದ್ದೇಶದೊಂದಿಗೆ ಜಗತ್ತಿನಾದ್ಯಂತ ಮಕ್ಕಳ ದಿನಾಚರಣೆಯನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸುತ್ತಿದ್ದಾರೆ. ನವೆಂಬರ್ 20ರಂದು ‘ಯುನಿವರ್ಸಲ್ ಚಿಲ್ಡ್ರನ್ಸ್ ಡೇ’ ಎಂದಾದರೆ, ಜೂನ್ 1ರಂದು ‘ಇಂಟರ್ ನ್ಯಾಷನಲ್ ಚಿಲ್ಡ್ರನ್ಸ್ ಡೇ’ ಆಚರಣೆಯಲ್ಲಿದೆ. ಇಂದು ಬಹಳಷ್ಟು ದೇಶಗಳು, ತಮ್ಮ ಮಕ್ಕಳಪ್ರೇಮಿ ರಾಷ್ಟ್ರನಾಯಕರೊಬ್ಬರ ಜನ್ಮದಿನವನ್ನು ‘ಮಕ್ಕಳ ದಿನಾಚರಣೆ’ ರೂಪದಲ್ಲಿ ಆಚರಿಸುತ್ತಿವೆ.*
*ಪ್ರಪಂಚದಲ್ಲಿ ಮಕ್ಕಳ ದಿನ ನವೆಂಬರ್20, ಪ್ರತಿವರ್ಷಆಚರಿಸಲಾಗುತ್ತದೆ. ಆದರೆ, ಭಾರತದಲ್ಲಿ ಮಕ್ಕಳ ದಿನ 14ನೇ ನವೆಂಬರ್ ನಲ್ಲಿ ಆಚರಿಸಲಾಗುತ್ತಿದೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ . ಈ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಯ್ದುಕೊಳ್ಳಲು ಕಾರಣ ನೆಹರು ಅವರಿಗೆ ಮಕ್ಕಳ ಬಗೆಗಿನ ಅಪಾರ ಪ್ರೀತಿ ಮತ್ತುಮೋಹ.*
*ಆದುದರಿಂದ ಅವರಿಗೆ ಚಾಚಾ("ಚಾಚಾ" ಚಿಕ್ಕಪ್ಪ, ತಂದೆ ಕಿರಿಯ ಸಹೋದರ ಅರ್ಥ) ಎಂದು ಹೆಸರು ಬಂದಿರುವುದು.*
*ಮಕ್ಕಳದಿನ ವಿಶೇಷವಾಗಿ ಶಾಲಾ ಮಟ್ಟದಲ್ಲಿ,ಭಾರತದಾದ್ಯಂತಆಚರಿಸಲಾಗುತ್ತದೆ. ನೈಜ ಆರ್ಥದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಿದರೆ ಆಗ ನಿಜವಾಗಿಯೂ ನೆಹರೂರವರಿಗೆ ನಾವು ಸಲ್ಲಿಸುವ ಗೌರವವು ಸಲ್ಲುತ್ತದೆ.*
*ಅಂದ ಹಾಗೆ ನವೆಂಬರ್ ಇಪ್ಪತ್ತರಂದು ವಿಶ್ವ ಮಕ್ಕಳ ದಿನಾಚರಣೆ. ನಮ್ಮ ಭಾರತದಲ್ಲಿ ಮಾತ್ರ ನವೆಂಬರ್ ಹದಿನಾಲ್ಕು. ಈ ತಿಂಗಳು ಜಗತ್ತಿನ ಎಲ್ಲಾ ಮಕ್ಕಳಿಗೂ ಮಕ್ಕಳಹಬ್ಬದ ಶುಭಾಶಯಗಳು. ಕಲ್ಮಶವರಿಯದ ಮುಗ್ಧ ಮಕ್ಕಳ ನಗು ನಮಗೆಲ್ಲಾ ಚೇತನ. ಈ ನಗು ಮಕ್ಕಳ ಮೊಗದಲ್ಲಿ ಸದಾ ಇರಲಿ.*